ಮತ ಕಳ್ಳತನ ಆರೋಪ: ಕಾಂಗ್ರೆಸ್ ಪ್ರೊಟೆಸ್ಟ್ ಮುಂದೂಡಿಕೆ..!

0
Spread the love

ಬೆಂಗಳೂರು: ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆಯಾಗಿದೆ. ಹೌದು ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್ 5 ರ ಬದಲು 8 ಕ್ಕೆ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

Advertisement

ಈ ಕುರಿತು ಣದೀಪ್ ಸಿಂಗ್ ಸುರ್ಜೇವಾಲ ಮಾಹಿತಿ ನೀಡಿದ್ದು, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ ಹೊಂದಿದ್ದು, ಅವರಿಗೆ ಅಂತಿಮ ನಮನ ಸಲ್ಲಿಸಲು ಹಿರಿಯ ನಾಯಕರು ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್​ಗೆ ತೆರಳುತ್ತಿದ್ದಾರೆ. ಹೀಗಾಗಿ ನಾಳೆ ನಿಗದಿಯಾಗಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

ಪ್ರತಿಭಟನಾ ಸಮಾವೇಶಕ್ಕೆ ನಾವು ಬಹಳ ಸಡಗರ ಹಾಗೂ ಕಾತರದಿಂದ ಕಾಯುತ್ತಿದ್ದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜತೆಗೆ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಾಳೆಯ ಬದಲು ಆಗಸ್ಟ್​ 8ಕ್ಕೆ ಪ್ರತಿಭಟನೆ ಮುಂದೂಡಿದ್ದೇವೆ. ಪಕ್ಷದ ವತಿಯಿಂದ ಶಿಬು ಸೊರೇನ್​ಗೆ​ ಅಂತಿಮ ನಮನ ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here