• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ

Vijaya Sakshi News Desk by Vijaya Sakshi News Desk
November 6, 2026
in India News
ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ
0
SHARES
2
VIEWS
Share on Facebook

ನವದೆಹಲಿ: ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಮತದಾರರ ಗುರುತಿನ ಚೀಟಿ (EPIC) ಸಂಖ್ಯೆ ಹಾಗೂ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕ್ರಮದಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ತೊಂದರೆಯಾಗಬಹುದು ಎಂದು ಸಿಪಿಐ(ಎಂ) ಆತಂಕ ವ್ಯಕ್ತಪಡಿಸಿದೆ.

ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರು, ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಮತ್ತು ಪಾವತಿಗಳನ್ನು ಖಚಿತಪಡಿಸುವ ಉದ್ದೇಶದಿಂದ ಮತದಾರರ ಗುರುತಿನ ಚೀಟಿ ಸಂಖ್ಯೆ ಹಾಗೂ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಆಧಾರ್ ಕಾರ್ಡ್‌ಗಳನ್ನು ಸುಲಭವಾಗಿ ನೋಂದಣಿ ಕೇಂದ್ರಗಳ ಮೂಲಕ ಕೆಲವೇ ನಿಮಿಷಗಳಲ್ಲಿ ಪಡೆಯಲು ಸಾಧ್ಯವಿರುವುದರಿಂದ, ಫಲಾನುಭವಿಗಳ ಗುರುತಿಸುವಿಕೆಗೆ ಆಧಾರ್ ಅಷ್ಟೊಂದು ವಿಶ್ವಾಸಾರ್ಹವಲ್ಲ ಎಂಬುದು ಸಚಿವರ ವಾದವಾಗಿದೆ.

ಆದರೆ, ಪಂಚಾಯತ್ ರಾಜ್ ಸಚಿವಾಲಯವು ವೈಯಕ್ತಿಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಯೋಜನೆಗಳನ್ನು ನೇರವಾಗಿ ನಿರ್ವಹಿಸುವುದಿಲ್ಲ. ಅಲ್ಲದೆ, ಯಾವೆಲ್ಲಾ ಯೋಜನೆಗಳಿಗೆ ಈ ಹೊಸ ವ್ಯವಸ್ಥೆ ಅನ್ವಯವಾಗಲಿದೆ ಎಂಬುದನ್ನೂ ಸಚಿವರು ಸ್ಪಷ್ಟಪಡಿಸಿಲ್ಲ. ಹೀಗಾಗಿ ಪ್ರಸ್ತಾವನೆಯ ವ್ಯಾಪ್ತಿ ಕುರಿತು ಪ್ರಶ್ನೆಗಳು ಎದ್ದಿವೆ.

ಎಸ್‌ಐಆರ್‌ ಪ್ರಕ್ರಿಯೆ ನಡುವೆ ಹೊಸ ನಿಯಮದ ಆತಂಕ

ಪ್ರಸ್ತುತ ದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕಲ್ಯಾಣ ಯೋಜನೆಗಳಿಗೆ ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸುವುದರಿಂದ ಲಕ್ಷಾಂತರ ಅರ್ಹ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ ಎಂದು ಸಿಪಿಐ(ಎಂ) ಬುಧವಾರ ಎಚ್ಚರಿಸಿದೆ.

ಈ ಪ್ರಸ್ತಾವನೆಯನ್ನು ವಿರೋಧಿಸಿರುವ ಪಕ್ಷದ ಪಾಲಿಟ್‌ಬ್ಯುರೊ, ಆಧಾರ್ ಆಧಾರಿತ ವ್ಯವಸ್ಥೆಯಿಂದ ಹಿಂದೆ ಸರಿದು ಮತದಾರರ ಗುರುತಿನ ಚೀಟಿ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸಿದರೆ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮತ್ತಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ಹೇಳಿದೆ.

ಹಿರಿಯರು, ಕಾರ್ಮಿಕರಿಗೆ ಬಯೋಮೆಟ್ರಿಕ್ ಸಮಸ್ಯೆ

ಬಯೋಮೆಟ್ರಿಕ್ ದೃಢೀಕರಣದಲ್ಲಿ ಎದುರಾಗುವ ತೊಂದರೆಗಳ ಬಗ್ಗೆಯೂ ಸಿಪಿಐ(ಎಂ) ಗಮನ ಸೆಳೆದಿದೆ. ಹಿರಿಯ ಮಹಿಳಾ ಕೃಷಿ ಕಾರ್ಮಿಕರ ಕಣ್ಣಿನ ಪಾಪೆ ಸ್ಕ್ಯಾನ್ ಆಗದಿರುವುದು ಹಾಗೂ ದಿನಗೂಲಿ ಕಾರ್ಮಿಕರ ಕೈಬೆರಳಚ್ಚು ಸವೆದುಹೋಗಿರುವುದರಿಂದ ದೃಢೀಕರಣ ವಿಫಲವಾಗುತ್ತಿರುವ ಉದಾಹರಣೆಗಳನ್ನು ಪಕ್ಷ ಉಲ್ಲೇಖಿಸಿದೆ.

ತಂತ್ರಜ್ಞಾನ ಆಧಾರಿತ ಪರಿಶೀಲನಾ ವ್ಯವಸ್ಥೆಯಿಂದ ಈಗಾಗಲೇ ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯಲು ಪರದಾಡುತ್ತಿದ್ದಾರೆ. ಸ್ಮಾರ್ಟ್‌ಫೋನ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆಗಳೂ ಗ್ರಾಮೀಣ ಜನರಿಗೆ ಹೊರೆಯಾಗುತ್ತಿವೆ ಎಂದು ಪಕ್ಷ ಆತಂಕ ವ್ಯಕ್ತಪಡಿಸಿದೆ.

ಆಧಾರ್‌ ಕುರಿತು ಕೇಂದ್ರದ ನಿಲುವಿಗೆ ಪ್ರಶ್ನೆ

ಆಧಾರ್ ಬಳಕೆಯ ಕುರಿತು ಕೇಂದ್ರ ಸರ್ಕಾರದ ನಿಲುವಿನಲ್ಲಿನ ಬದಲಾವಣೆಯನ್ನೂ ಸಿಪಿಐ(ಎಂ) ಪ್ರಶ್ನಿಸಿದೆ. ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಕಲ್ಯಾಣ ಯೋಜೆಗಳ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ನಂತರದ ದಿನಗಳಲ್ಲಿ ವಿವಿಧ ಕಲ್ಯಾಣ ಯೋಜನೆಗಳಿಗೆ ಆಧಾರ್ ಜೋಡಣೆಯನ್ನು ವಿಸ್ತರಿಸಿತು ಎಂದು ಪಕ್ಷ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

Tags: Aadhaar CardBiometric AuthenticationBreakingNewsCentral GovernmentcpimEPIC CardKarnatakaNewsHeadlinessirVijayasakshivijayasakshinewsVoter IDWelfare Schemes
ShareSendShare
Previous Post

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

Next Post

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

November 6, 2026
ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

November 6, 2026
ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ

ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ

November 6, 2026
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

November 6, 2026
ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper