HomeBengaluru Newsಮತದಾರರ ಹಕ್ಕು ಕಳೆದುಕೊಳ್ಳಬಾರದು: ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ಮತದಾರರ ಹಕ್ಕು ಕಳೆದುಕೊಳ್ಳಬಾರದು: ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಪ್ರಜೆಯ ಮತದಾನದ ಹಕ್ಕು ಕಳೆದುಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು. ಸಾರ್ವಜನಿಕರಲ್ಲಿ ಗೊಂದಲ ಅಥವಾ ಆತಂಕ ಸೃಷ್ಟಿಯಾಗದಂತೆ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇತರೆ ಕೆಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟಿರುವ ಘಟನೆಗಳು ವರದಿಯಾಗಿವೆ. ಆದರೆ ಕೇರಳದಲ್ಲಿ ಈ ಪ್ರಕ್ರಿಯೆ ಯಶಸ್ವಿಯಾಗಿ ಜಾರಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಯಾವುದೇ ಅರ್ಹ ಮತದಾರರ ಹೆಸರು ಕೈತಪ್ಪದಂತೆ ಅಧಿಕಾರಿಗಳು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ತಿಳಿಸಿದರು.

ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸಲು ಪ್ರತ್ಯೇಕ ವ್ಯವಸ್ಥೆ ರೂಪಿಸುವಂತೆ ಸೂಚಿಸಿರುವ ಅವರು, ಜಾಗೃತಿ ಕಾರ್ಯಕ್ರಮಗಳಿಗಾಗಿ ವಿಶೇಷ ಅಧಿಕಾರಿಗಳ ತಂಡ ರಚಿಸಲು ನಿರ್ದೇಶನ ನೀಡಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆ ಮೂಲಕ ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳು, ಮೃತಪಟ್ಟವರ ವಿವರಗಳು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾಗಿರುವ ಹೆಸರುಗಳನ್ನು ತೆರವುಗೊಳಿಸಲಾಗುತ್ತದೆ. ಆದರೆ ಈ ಪ್ರಕ್ರಿಯೆ ವೇಳೆ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯುವ ಅಪಾಯವಿರುವುದರಿಂದ ಸರ್ಕಾರ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಗಳತ್ತ ಗಮನ ಹರಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!