ಮತದಾನ ಜಾಗೃತಿ ಅಭಿಯಾನ : ಮಾಣಿಕರಾವ್ ಪಾಟೀಲ್

0
soratur
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಚುನಾವಣೆಯಲ್ಲಿ ಯಾರೂ ಕೂಡ ಮತದಾನದಿಂದ ಹೊರಗುಳಿಯದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದರು.

Advertisement

ಜಿಲ್ಲಾ ಹಾಗೂ ತಾಲೂಕಾ ಸ್ವೀಪ್ ಸಮಿತಿ ಸೇರಿದಂತೆ ಗ್ರಾಮ ಪಂಚಾಯತ ಸೊರಟೂರ ಸಹಯೋಗದಲ್ಲಿ ಸೊರಟೂರ ಗ್ರಾ.ಪಂ ವ್ಯಾಪ್ತಿಯ ಮಹಾಲಿಂಗಪುರ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು 18 ವರ್ಷ ತುಂಬಿದ ಯುವ ಮತದಾರರಿಗೆ VHA App ದಲ್ಲಿ ನೋಂದಾಯಿಸಲು ಕರೆ ನೀಡಿದರು. ಮತದಾನ ಪ್ರಕ್ರಿಯೆಯಿಂದ ಯಾವೊಬ್ಬ ವ್ಯಕ್ತಿಯೂ ಹೊರಗುಳಿಯಬಾರದು ಎಂದು ತಿಳಿಸಿದರು. ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಾ ಬೇಸಿಗೆ ಅವಧಿಯಲ್ಲಿ ನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರಿಗೆ ನಿರಂತರವಾಗಿ ಕೆಲಸ ನೀಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲತೇಶ್ ಮೇವುಂಡಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸಿಬ್ಬಂದಿಗಳು, ತಾಲೂಕು ನರೇಗಾ ಸಿಬ್ಬಂದಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here