ವಿಜಯಸಾಕ್ಷಿ ಸುದ್ದಿ, ಗದಗ : ನೆಹರು ಯುವ ಕೇಂದ್ರ ಗದಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ SVEEP ಸಮಿತಿ ಗದಗ ಮತ್ತು ಶ್ರೀ ಸಹಸ್ರಾರ್ಜುನ್ ಶಿಕ್ಷಣ ಮಹಾವಿದ್ಯಾಲಯ, ಲಕ್ಷ್ಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಾಧಿಕಾರಿ ಎನ್.ರಂಜನಿ ಮಾತನಾಡಿ, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ವೀರೇಂದ್ರಗೌಡ ಪಾಟೀಲ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಮ್. ಅಂಗಡಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಯುವ ಜನತೆ ಮಾಡಬೇಕು ಎಂದು ತಿಳಿಸಿದರು.
ಬಸಮ್ಮ ಪಾಟೀಲ್ ಪ್ರಾರ್ಥಿಸಿದರೆ, ಪ್ರವೀಣ್ ಮ್ಯಾಗೆರಿ ಸ್ವಾಗತಿಸಿದರು. ವಂದನಾರ್ಪಣೆಯನ್ನು ವಸಂತಕುಮಾರ್ ನೆರವೇರಿಸಿದರು. ಗದಗ ಜಿ.ಪಂ ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.