ಸಧೃಡ ರಾಷ್ಟ್ರನಿರ್ಮಾಣಕ್ಕೆ ಮತದಾನ ಮುಖ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಎಲ್ಲ ಯುವ ಮತದಾರರು ಜಾಗೃತರಾಗಿ ಮತದಾನದ ವೇಳೆ ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಬೇಕು. ಒಂದೊಂದು ಮತವೂ ಸಹ ಅತ್ಯಮೂಲ್ಯವಾಗಿರುವದರಿಂದ, ಸದೃಢ ರಾಷ್ಟ್ರನಿರ್ಮಾಣಕ್ಕೆ ನಿಮ್ಮ ಮತದಾನ ಅತೀ ಪ್ರಮುಖವಾಗಿದೆ ಎಂದು ತಹಸೀಲ್ದಾರ ಅನಿಲ ಬಡಿಗೇರ ಹೇಳಿದರು.

Advertisement

ಅವರು ಶನಿವಾರ ಶಿರಹಟ್ಟಿಯ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಡೀ ಜಗತ್ತಿಗೆ ಮಾದರಿಯಾದ ಪ್ರಜಾಪ್ರಭುತ್ವ ನಮ್ಮದಾಗಿದ್ದು, ಇದನ್ನು ಇನ್ನಷ್ಟು ಗಟ್ಟಿಗೊಳಿಸುವುದಕ್ಕಾಗಿ 18 ವರ್ಷ ಮೀರಿದ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬೇಕು. ನಿಮ್ಮ ನೆರೆ-ಹೊರಯವರಿಗೂ ಸಹ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾನಕ್ಕೆ ಪ್ರೇರೇಪಿಸುವ ಕೆಲಸವಾಗಬೇಕು. ಮತದಾನದ ಪ್ರಮಾಣ ಹೆಚ್ಚಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವದ ಶಕ್ತಿ ಇಮ್ಮಡಿಗೊಳಿಸುವುದಕ್ಕೆ ಎಲ್ಲ ಯುವಕರು ಮುಂದಾಗಬೇಕೆAದು ಹೇಳಿದರು.

ತಾ.ಪಂ ಇಓ ಎಸ್.ಎಸ್. ಕಲ್ಮನಿ, ಪಿಎಸ್‌ಐ ಚನ್ನಯ್ಯ ದೇವೂರ, ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಪ್ರಾಚಾರ್ಯ ಎಂ.ಸಿ. ಭಜಂತ್ರಿ, ಉಪನ್ಯಾಸಕಿ ಸುಧಾ ಹುಚ್ಚಣ್ಣವರ, ಶಿವನಗೌಡ ಪಾಟೀಲ, ಮಹೇಶ ದಾನಪ್ಪಗೌಡ್ರ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here