ಮತದಾನ ಪ್ರಜಾಪ್ರಭುತ್ವದ ಬುನಾದಿ : ಆರ್.ಎಸ್. ಬುರಡಿ

0
voting
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕೆಎಲ್‌ಇ ಸೊಸೈಟಿಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ SVEEPಮತ್ತು NSS ಘಟಕವು ರೋಟರಿ ಕ್ಲಬ್ ಗದಗ ಬೆಟಗೇರಿ ಸಹಯೋಗದಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು.

Advertisement

ಗದಗ ಶಹರ ಬಿಇಓ ಆರ್.ಎಸ್. ಬುರಡಿ ಮಾತನಾಡಿ, ಭಾರತದಲ್ಲಿ ಪ್ರಜಾಪ್ರಭುತ್ವದ ಬುನಾದಿ ಮತದಾನ. ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಅದರಲ್ಲಿ ಭಾಗವಹಿಸುವ ಹಕ್ಕು ಮತ್ತು ಜವಾಬ್ದಾರಿ ಇದೆ.

ಮತದಾನವು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಮತ್ತು ಭಾರತದ ರಾಜಕೀಯ ಭೂದೃಶ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದರು.

ರೊ. ಶ್ರೀಧರ್ ಸುಲ್ತಾನಪೂರ ಮಾತನಾಡಿ, ಮತದಾನವು ನಾಗರಿಕರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ಚಲಾಯಿಸಲು ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಎಂದರು.

ಡಾ. ಎ.ಕೆ. ಮಠ ಮಾತನಾಡಿ, ಪಾರದರ್ಶಕ ಪ್ರಜಾಪ್ರಭುತ್ವ ರಾಷ್ಟçವನ್ನು ರಚಿಸಲು ಹೆಚ್ಚಿನ ಯುವ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಮಹತ್ವದೊಂದಿಗೆ ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಪ ಪ್ರಾಂಶುಪಾಲೆ ಡಾ.ವೀಣಾ ಇ, ಡಾ. ವಿಠಲ್ ಕೋಲಿ, ಆರ್‌ಸಿಜಿಬಿ ಅಧ್ಯಕ್ಷ ರೊ. ಚಂದ್ರಮೌಳಿ ಜಾಲಿ, ರೊ. ಎಸ್.ಎಸ್. ಹೊಸಳ್ಳಿಮಠ, ಅಕ್ಷಯ್ ಶೆಟ್ಟಿ, ಆರ್‌ಸಿಜಿಬಿ ಕಾರ್ಯದರ್ಶಿ ವೀಣಾ ತಿರ್ಲಾಪೂರ, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here