ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ: ಎಂಬಿ ಪಾಟೀಲ್

0
Spread the love

ವಿಜಯಪುರ: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದರು.

Advertisement

ಇನ್ನೂ ಬಿಜೆಪಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್​​ನಿಂದಲೂ ಕಾಂಗ್ರೆಸ್​ಗೆ ಬರುತ್ತಾರೆ.

ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗಿರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದಾಗ ಅಂಕಿ ಸಂಖ್ಯೆ ಬಗ್ಗೆ ಮಾಹಿತಿ ನೀಡಿ ಎಂದು ಮಾಧ್ಯಮದವರು ಕೇಳಿದರು. ಇದಕ್ಕೆ ಎಂಬಿ ಪಾಟೀಲರು, ಬಹಳಷ್ಟು ಜನರು ಎಂದು ಹೇಳುತ್ತೇವೆ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.


Spread the love

LEAVE A REPLY

Please enter your comment!
Please enter your name here