ವಕ್ಫ್ ತಿದ್ದುಪಡಿ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ: ಸಿಎಂ ಮಮತಾ ಬ್ಯಾನರ್ಜಿ

0
Spread the love

ಪಶ್ಚಿಮ ಬಂಗಾಳ: ವಕ್ಫ್ ತಿದ್ದುಪಡಿ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅನೇಕರು ವಿರೋಧಿಸುವ ಕಾನೂನನ್ನು ನಾವು ಜಾರಿ ಮಾಡಿಲ್ಲ ಎನ್ನುವುದು ನೆನಪಿಡಬೇಕು.

Advertisement

ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನೀವು ಬಯಸುವ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಾಗಿ, ಗಲಭೆ ಯಾವುದಕ್ಕಾಗಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿ ಕೊಳ್ಳಲು ಪ್ರಯತ್ನಿಸುತ್ತಿವೆ. ಜನರು ನನ್ನ ಮನವೊಲಿಕೆಗೆ ಮಣಿಯಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಗಲಭೆಯನ್ನು ಪ್ರಚೋದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಮತಾ ಎಚ್ಚರಿಸಿದರು.

 


Spread the love

LEAVE A REPLY

Please enter your comment!
Please enter your name here