HomePolitics Newsಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ: ಸಿ.ಟಿ.ರವಿ

ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ: ಸಿ.ಟಿ.ರವಿ

For Dai;y Updates Join Our whatsapp Group

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‌ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ.

ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು. ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲಾ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img