ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ತಂದಿರುವುದರಿಂದ ದೇಶದ ರೈತರು ನಿಟ್ಟುಸಿರು ಬಿಡುವಂತಾಗಿದೆ ಎಂದು ಬಿಜೆಪಿ ಮುಖಂಡ ಶಿವು ಹಿರೇಮನಿಪಾಟೀಲ ಸ್ವಾಗತಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಬೆನ್ನೆಲುಬಾಗಿರುವ ರೈತನ ಜಮೀನನ್ನು ವಕ್ಫ್ ಹೆಸರಿನಲ್ಲಿ ಕಬಳಿಸುವ ಕೆಟ್ಟ ಸಂಸ್ಕೃತಿ ದೇಶದಲ್ಲಿತ್ತು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ತಂದು ದೇಶದ ಬಡ ರೈತರನ್ನು ರಕ್ಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಬಿಲ್ ಮಂಡನೆ ಮಾಡಿದ್ದು ಸಂತಸದ ವಿಷಯ.
ಸ್ವಾತಂತ್ರ್ಯನಂತರ ಒಂದು ರಾಜಕೀಯ ಪಕ್ಷದ ಕಪಿಮುಷ್ಠಿಯಲ್ಲಿದ್ದ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿಯು ದೇಶದ ಜನರಿಗೆ ಹಾಗೂ ಮುಸ್ಲಿಂ ಮಹಿಳೆಯರಿಗೆ ಸಂತಸ ತಂದಿದೆ ಎಂದು ಅವರು ವಕ್ಫ್ ತಿದ್ದುಪಡಿ ಮಸೂದೆಯನ್ನು ಸ್ವಾಗತಿಸಿದ್ದಾರೆ.