ಬಾಕಿ ಪ್ರಕರಣಗಳನ್ನು ತಿಂಗಳಲ್ಲಿ ಪರಿಹರಿಸಿ : ಜಮೀರ ಅಹ್ಮದ

0
Waqf and housing projects progress review meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಜಿಲ್ಲೆಯಲ್ಲಿ 2453 ವಕ್ಫ್ ಆಸ್ತಿಗಳಿದ್ದು ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್ ಆಸ್ತಿಗಳ ಸಮೀಕ್ಷೆ, ರಕ್ಷಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ ಅಹ್ಮದ ಹೇಳಿದರು.

Advertisement

ಅವರು ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.

ಧಾರವಾಡ ಜಿಲ್ಲೆಯಲ್ಲಿ 604 ವಕ್ಫ್ ಸಂಸ್ಥೆಗಳಿಗೆ 2453 ವಕ್ಫ್ ಆಸ್ತಿಗಳಿವೆ. ವಕ್ಫ್ ಸಂಬಂಧಿಸಿದಂತೆ ಯಾವುದೇ ಆಸ್ತಿಯು ಒತ್ತುವರಿ ಆಗಿರುವ ವರದಿ ಇಲ್ಲ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಧಿಕಾರಿಗಳು ಮುಕ್ತಾಯಗೊಳಿಸಬೇಕೆಂದು ಅವರು ಹೇಳಿದರು.

ವಸತಿ ಯೋಜನೆಯಡಿ ಸ್ಲಂಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆದಿದ್ದು, ಅವಳಿನಗರದಲ್ಲಿ ಬಾಕಿ ಇರುವ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಉತ್ತರ-ಕನ್ನಡ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಹಾಗೂ ಕಬರಸ್ತಾನಗಳಿಗೆ ಭೂಮಿ ಸಮಸ್ಯೆ ಇದ್ದು, ಈ ಕುರಿತು ಕಂದಾಯ ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ಜರುಗಿಸಿ, ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಎನ್.ಎಚ್. ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಉತ್ತರ-ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕೆ. ಸೇರಿಂತೆ ವಕ್ಫ್ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯ ಮಟ್ಟದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here