ವಕ್ಫ್ ಆಸ್ತಿ ವಿವಾದ: ಜನರ ಸಮಸ್ಯೆ ಆಲಿಸಿ ವಿಸ್ತೃತ ವರದಿ ನೀಡ್ತೀನಿ: ಜಗದಾಂಬಿಕಾ ಪಾಲ್

0
Spread the love

ಹುಬ್ಬಳ್ಳಿ: ವಿಜಯಪುರದಲ್ಲಿ ವಕ್ಫ್​ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್​ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್​ ಹೆಸರನ್ನು ಡಿಲೀಟ್​ ಮಾಡಲಾಗಿದೆ. ಇದರ ಬೆನ್ನಲ್ಲೇ ವಕ್ಫ್ ಬೋರ್ಡ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹುಬ್ಬಳ್ಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.

Advertisement

ಹೌದು ಹುಬ್ಬಳ್ಳಿಗೆ ಆಗಮಿಸಿದ ಪಾಲ್ ನೇತೃತ್ವದ ಸಮಿತಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಸ್ವಾಗತ ಕೋರಿದರು. ವಿವಾದದ ಕುರಿತು ಮಾತನಾಡಿದ ಜಗದಾಂಬಿಕಾ ಪಾಲ್, ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ. ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ವೀಕಾರಕ್ಕೆ ನೀಡಲಾಗುವುದು. ಕರ್ನಾಟಕದ ರೈತರು, ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಸುಮಾರು 50 ರಿಂದ 60 ವರ್ಷಗಳಿಂದ ಉಳಿಮೆ ಮಾಡಿದ ಜಮೀನು. ದೇವಸ್ಥಾನಗಳ ಕಬಳಿಸಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ್ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದಾರೆ. ಇದನ್ನು ಸಹ ಪರಿಗಣಿಸಲಾಗುವುದು ಎಂದು ಪಾಲ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here