ವಿಜಯಪುರ:- ವಕ್ಫ್ ಆಸ್ತಿ ಅಲ್ಲಾನ ಆಸ್ತಿ, ಇದು ದಾನಿಗಳಿಂದ ಬಂದಿದ್ದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ. ಅದು ದಾನಿಗಳು ದಾನ ಮಾಡಿರುವ ಆಸ್ತಿ, ಯಾರೂ ಸರ್ಕಾರದಿಂದ ಕೊಟ್ಟಿರುವುದಲ್ಲ. ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಇಷ್ಟು ದಿನ ಮುಡಾದ ಬಗ್ಗೆ ಮಾತನಾಡಿದರು.
ಅದರಲ್ಲಿ ಏನೂ ಎಲ್ಲ ಎಂದು ಗೊತ್ತಾದ ಮೇಲೆ ಈಗ ವಕ್ಫ್‌ನ್ನು ಹಿಡಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮೂರು ಕಡೆ ಉಪಚುನಾವಣೆ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಚುನಾವಣೆ ಇದೆ. ಆದ್ದರಿಂದ ರಾಜಕೀಯ ಗಿಮಿಕ್‌ಗೋಸ್ಕರ ಸುಮ್ಮನೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಕ್ಫ್ ವಿಚಾರದಲ್ಲಿ ಬಿಜೆಪಿಯವರು ಅನವಶ್ಯಕ ಗೊಂದಲ ಸೃಷ್ಟಿ ಮಾಡಿದ್ದಾರೆ. ಅಲ್ಲಿ ಯಾರಿಗೂ ನಾವು ನೋಟಿಸ್ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲೂ ವಕ್ಫ್ ಆಸ್ತಿ ಅತಿಕ್ರಮಿಸಿದ ಸಾವಿರಾರು ಜನರಿಗೆ ನೋಟಿಸ್ ನೀಡಿದೆ. ವಕ್ಫ್‌ನಲ್ಲಿ ಒಂದು ಇಂಚು ಸರ್ಕಾರದ ಆಸ್ತಿ ಇಲ್ಲ. ವಕ್ಫ್ ಆಸ್ತಿ ಸಾಕಷ್ಟು ಒತ್ತುವರಿಯಾಗಿದೆ. ಅದನ್ನು ಸರಿಪಡಿಸುವ ಕೆಲಸ ನಾನು ಮಾಡುತ್ತಿದ್ದೇನೆ ಎಂದರು.