ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅಂಜುಮನ್ ಏ ಇಸ್ಲಾಂ ಕಮಿಟಿ ವಕ್ಫ್ ಸಂಸ್ಥೆಯ ಕರ್ನಾಟಕ ರಾಜ್ಯ ವಕ್ಫ್ ನಿಯಮ-೨೦೧೭ರ ಪ್ರಕಾರ ಬೈಲಾ ಅನುಮೋದನೆಗೊಂಡಿದ್ದು, ಗದಗ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಭೆಯಲ್ಲಿ ಸದರಿ ಸಂಸ್ಥೆಗೆ ಚುನಾವಣೆ ಜರುಗಿಸಲು ಚುನಾವಣಾಧಿಕಾರಿಯನ್ನು ನೇಮಕ ಮಾಡಲಾಗಿದೆ.
Advertisement
ಸದರಿ ವಕ್ಫ್ ಸಂಸ್ಥೆಯ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಜಿ.ಎಂ. ದಂಡಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.