ಲಖನೌ:- ಉತ್ತರ ಪ್ರದೇಶದ ಬಸ್ತಿಯಲ್ಲಿ ಖಾಸಗಿ ಆಸ್ಪತ್ರೆಯೊಂದರ ವಾರ್ಡ್ ಬಾಯ್, ಮಹಿಳಾ ರೋಗಿಯನ್ನು ನಗ್ನಗೊಳಿಸಿ ಶಸ್ತ್ರಚಿಕಿತ್ಸೆ ಮಾಡಿದ್ದಲ್ಲದೆ ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆ ಜರುಗಿದೆ.
ಹರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವಿಷಯ ಆಕ್ರೋಶ ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ.
ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.
ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.
ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದ ನಿರ್ದೇಶಕ ಡಾ.ಸಂಜಯ್ ಕುಮಾರ್ ಸೂಚನೆಯಂತೆ ಶಸ್ತ್ರಚಿಕಿತ್ಸೆ ನಡೆಸಿದ್ದೇನೆ ಎಂದು ವಾರ್ಡ್ ಬಾಯ್ ಹೇಳಿದ್ದಾನೆ. ಸಂಜಯ್ ಗೌತಮ್ ಅವರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಆಸ್ಪತ್ರೆಯ ಆಡಳಿತವು ಈ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದೆ. ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ತಂಡವನ್ನು ರಚಿಸಿದೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ತನಿಖೆ ನಡೆಸಲು ವೈದ್ಯಕೀಯ ಅಧಿಕಾರಿಯನ್ನು ಆಸ್ಪತ್ರೆಗೆ ಕಳುಹಿಸಿದ ನಂತರ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರು ಅವಮಾನಕರ ಕೃತ್ಯಕ್ಕಾಗಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.