ಬೆಳಗಾವಿ: ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಊಟ ಮಾಡಿದ ಬಳಿಕ ಬಿಲ್ ಕೇಳಿದ ಹೋಟೆಲ್ ಮಾಲೀಕರ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ಜರುಗಿದೆ
ಪಟ್ಟಣದ ರತ್ನಾ ಹೋಟೆಲ್ ಮಾಲೀಕ ಹಾಗೂ ಅವರ ಮಗನ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಈ ದೃಶ್ಯಗಳು ಹೋಟೆಲ್ನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಘಟನೆಯ ನಂತರ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪವೂ ಕೇಳಿ ಬಂದಿದೆ. ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ತವರೂರಾದ ಈ ಪ್ರದೇಶದಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳು ಎದ್ದಿವೆ.



