ನವದೆಹಲಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ ಎಸ್ಐಟಿ ರಚಿಸಲಾಯಿತೆ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು,
ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ ಎಸ್ಐಟಿ ರಚಿಸಲಾಯಿತೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಬದಲು ಸರಿಯಾಗಿ ಪೊಲೀಸ್ ತನಿಖೆ ನಡೆಸಬಹುದಿತ್ತು. ಆದರೆ ಅದೇನೋ ಅಗೆದು ಗುಡ್ಡೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ದಿನ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ ಎಂದಿದ್ದಾರೆ.



