ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೇಟಗೇರಿ ನಗರಸಭೆಯಿಂದ ನಗರದ ಸ್ವಚ್ಛತೆಗಾಗಿ ತ್ಯಾಜ್ಯ ಸಾಗಾಟದ ಟ್ರ‍್ಯಾಕ್ಟರ್ ಟ್ರೇಲರ್, ಮನೆ ಮನೆ ತ್ಯಾಜ್ಯ ಸಂಗ್ರಹಣೆಗೆ ಮಿನಿ ಟಿಪ್ಪರ್ ವಾಹನಗಳನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಮಂಗಳವಾರ ಲೋಕಾರ್ಪಣೆಗೊಳಿಸಿದರು.
ನಗರಸಭೆ ಆವರಣದಲ್ಲಿ ನಗರಸಭೆ ಕಾರ್ಯಾಲಯದ ಸನ್ 2024/25ನೇ ಸಾಲೀನ 15ನೇ ಹಣಕಾಸು ನಿರ್ಬಂಧಿತ ಯೋಜನೆಯ ಅವನುದಾನದಲ್ಲಿ ಒಟ್ಟು ಅಂದಾಜು 1 ಕೋಟಿ ವೆಚ್ಚದಲ್ಲಿ ಖರೀದಿಸಲಾದ ತ್ಯಾಜ್ಯ ಸಾಗಾಟದ 4 ಟ್ರ‍್ಯಾಕ್ಟರ್ ಟ್ರೇಲರ್, ಮನೆ ಮನೆ ತ್ಯಾಜ್ಯ ಸಂಗ್ರಹಣೆಗೆ 6 ಮಿನಿ ಟಿಪ್ಪರ್ ವಾಹನಗಳನ್ನು ವಾಹನಗಳನ್ನು ಲೋಕಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ನಗರಸಭೆಯಿಂದ ಬಿ ಖಾತಾ ಉತಾರಗಳನ್ನು ಸಾಂಕೇತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ನಗರಸಭೆ ಸದಸ್ಯರು ಹಾಜರಿದ್ದರು.