HomeKarnataka Newsಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಜನರಿಗೆ ಡಬಲ್ ಶಾಕ್!

ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಜನರಿಗೆ ಡಬಲ್ ಶಾಕ್!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬಿಸಿಲಿನ ನಡುವೆ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆದಿದ್ದು, ಹಲವೆಡೆ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ನಿವಾಸಿಗಳು ದೂರದ ಪ್ರದೇಶಗಳಿಂದ ನೀರು ತರುವಂತಾಗಿದೆ. ಅಲ್ಲದೆ, ಮೂರು ದಿನಕ್ಕೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ಮಾತ್ರ ನೀರು ಪೂರೈಕೆ ಆಗುತ್ತಿರುವುದರಿಂದ ಜನಜೀವನಕ್ಕೆ ತೊಂದರೆ ಉಂಟಾಗಿದೆ.

ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆಗೆ ವಿರೋಧವಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ನೀರು ನೀಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಇನ್ನೊಂದೆಡೆ, ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನರು ಚರಂಡಿ ಪೈಪ್‌ಗಳಿಂದಲೇ ನೀರು ಸಂಗ್ರಹಿಸುವ ದುಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ಭಾಗದಲ್ಲಿ ಜೀವನಾಡಿಯಾಗಿದ್ದ ಸ್ವರ್ಣ ನದಿಯ ನೀರಿನ ಮಟ್ಟವೂ ಕಳೆದ ವರ್ಷಕ್ಕಿಂತ ಒಂದು ಮೀಟರ್‌ಷ್ಟು ಕುಸಿದಿದ್ದು, ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಭೀತಿ ಇದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿಸಿಗಳ ಸಭೆಯಲ್ಲಿ ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹದ ಕುರಿತು ಸಮೀಕ್ಷೆ ನಡೆಸಲಾಗಿದೆ. ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮುಂಗಾರು ಕೊರತೆ ಉಂಟಾಗುವ ಸಾಧ್ಯತೆ ಇದ್ದು, 213 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ನೀರಿನ ಸಮಸ್ಯೆ ತೀವ್ರವಾದರೆ ಸಂಬಂಧಿತ ಜಿಲ್ಲಾಧಿಕಾರಿಗಳೇ ನೇರ ಹೊಣೆ ಹೊರುವಂತೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!