ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಫಿಕ್ಸ್: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ!

0
Spread the love

ಬೆಂಗಳೂರು:- ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದರು.

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ.

ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here