HomeGadag Newsಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗಲಿ

ಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಸಮರ್ಪಕ ನೀರು ಪೂರೈಸಲು ಆದ್ಯತೆ ವಹಿಸಬೇಕು. ಪ್ರತಿ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚನೆ ನೀಡಿದರು.

ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಸರಬರಾಜು ಕುರಿತಂತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಿರ್ದೇಶನ ನೀಡಿದರು.

ಅಗತ್ಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ನೀರು ಸರಬರಾಜು ಮಾಡಲು ಪ್ರಥಮಾದ್ಯತೆ ನೀಡಬೇಕು. ವಿನಾಕಾರಣ ನೀರಿನ ಅಪವ್ಯಯವನ್ನು ತಡೆದು ಅಗತ್ಯವಿರುವಲ್ಲಿ ನೀರು ಪೂರೈಕೆ ಮಾಡಲು ಅಧಿಕಾರಿ ವರ್ಗ ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ರಾತ್ರಿ ನದಿಯಿಂದ ಜಾಕ್‌ವೆಲ್ ಮೂಲಕ ನೀರನ್ನು ಟ್ಯಾಂಕುನಲ್ಲಿ ಸಂಗ್ರಹಿಸಿ, ಮುಂಜಾನೆ ವಾರ್ಡ್ವಾರು ನೀರು ಪೂರೈಕೆಗೆ ವಾಲ್‌ಮನ್‌ಗಳು ಮುಂದಾಗಬೇಕು ಎಂದು ಸೂಚಿಸಿದರು.

ನಗರಸಭೆಯಿಂದ ಸದ್ಯ ಕಾರ್ಯನಿರ್ವಹಿಸುತ್ತಿರುವ ವಾಲ್‌ಮನ್‌ಗಳು, ಸೂಪರ್‌ವೈಸರ್‌ಗಳನ್ನು ಬದಲಾವಣೆ ಮಾಡಬೇಕು. ಅವರಿಗೆ ಪ್ರತ್ಯೇಕ ಬೀದಿ, ವಾರ್ಡ್ಗಳ ಮರುಹಂಚಿಕೆ ಮಾಡಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ನಗರಸಭೆ ಪೌರಾಯುಕ್ತರು ಮುಂದಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

ಅವಳಿ ನಗರಕ್ಕೆ ನೀರು ಪೂರೈಕೆಗಾಗಿಯೇ ಓರ್ವ ಪ್ರತ್ಯೇಕ ಇಂಜಿನಿಯರ್ ನೇಮಕ ಮಾಡಿ ನೀರು ಪೂರೈಕೆ ಸರಳೀಕರಣಗೊಳಿಸಬೇಕು. ಅಲ್ಲದೆ ಪೈಪ್, ವಾಲ್‌ನಿಂದ ಪೋಲಾಗುವ ನೀರನ್ನು ತಡೆಯಲು ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಲು ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.

ಅವಳಿ ನಗರಕ್ಕೆ ನೀರು ಪೂರೈಕೆ ಕುರಿತಂತೆ ನಗರಸಭೆ ಪೌರಾಯುಕ್ತರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಸಮರ್ಪಕ ನೀರು ಪೂರೈಕೆ ಆಗುತ್ತಿರುವ ಬಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ್ ಬಬರ್ಚಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಸೇರಿದಂತೆ ನಗರಸಭೆಯ ಅಧಿಕಾರಿಗಳು, ವಾಲ್‌ಮಗಳು ಸೂಪರ್‌ವೈಸರ್‌ಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಮೊದಲು ದಿಬ್ಬದಲ್ಲಿರುವ ಮನೆಗಳಿಗೆ ನೀರಿನ ಪೂರೈಕೆ ಮಾಡಬೇಕು. ನಂತರದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಪೂರೈಕೆ ಆಗುವಂತೆ ನಿಗಾ ವಹಿಸಬೇಕು ಎಂದು ಹೇಳಿದರು.

“ನಾವೆಲ್ಲರೂ ನೀರು ಪೂರೈಕೆ ಮಾಡುವ ವಾಲ್‌ಮನ್ ಮೇಲೆ ವಿಶ್ವಾಸವಿಟ್ಟು ಗಮನಿಸೋಣ, ಮುಂದಿನ 100 ದಿವಸದೊಳಗೆ ಸಮರ್ಪಕ ನೀರಿನ ವ್ಯವಸ್ಥೆ ಆಗುವಂತೆ ಅವರು ಕಾರ್ಯನಿರ್ವಹಿಸುವ ವಿಶ್ವಾಸವಿದೆ. ನೀರು ಪೂರೈಕೆ ಕುರಿತಂತೆ ನವಂಬರ್ 1ರಂದು ಮತ್ತೆ ನಾವೆಲ್ಲರೂ ಸೇರೋಣ, ಆಗ ನೀರಿನ ಪೂರೈಕೆ ಸಮಸ್ಯೆ ಸಂಪೂರ್ಣ ನಿವಾರಣೆಯಾಗಿರಬೇಕು”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!