ಚಾಮರಾಜನಗರ: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಗ್ರಾ.ಪಂ. ಕಚೇರಿ ಬಾಗಿಲು ಬಳಿ ವಾಟರ್ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಸು ನಾಯಕ (65) ಮೃತ ದುರ್ದೈವಿಯಾಗಿದ್ದು,
Advertisement
ಕಳೆದ 27 ತಿಂಗಳುಗಳಿಂದ ಸಂಬಳ ಸಿಗದೆ ಚಿಕ್ಕಸು ಬೇಸತ್ತು ಹೋಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಚಕ್ಕಸು, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೂಪಾ ಮತ್ತು ಪಿಡಿಓ ರಾಮೇಗೌಡ ಚಿಕ್ಕಸು ಅವರನ್ನು ಗದರಿಸಿ ಕಳುಹಿಸುತ್ತಿದ್ದರು.
ಇದರಿಂದ ಬೇಸತ್ತ ವಾಟರ್ಮ್ಯಾನ್ ಚಿಕ್ಕಸು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಮುಂದೆಯೇ ನೇಣು ಬಿಗಿಕೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.