ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ನೆರವು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಫೋನ್ ಮೂಲಕ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದುರಂತಕ್ಕೆ ಆಘಾತ ವ್ಯಕ್ತಪಡಿಸಿದರು.
ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದುರಂತದಲ್ಲಿ ಸಿಲುಕಿಕೊಂಡವರ ರಕ್ಷಣೆ ಸಂಬಂಧ ಸಚಿವ ಸಂತೋಷ್ ಲಾಡ್ ಅಧಿಕಾರಿಗಳ ಜೊತೆ ವಾಯನಾಡಿಗೆ ತೆರಳುತ್ತಿದ್ದು, ಮಧ್ಯಾಹ್ನದ ವೇಳೆಗೆ ವಾಯನಾಡ್ಗೆ ತಲುಪಲಿದ್ದಾರೆ. ಬೆಂಗಳೂರಿನಲ್ಲಿರುವ ಎನ್ಡಿಆರ್ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ಈಗಾಗಲೆ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.



