ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ: ಡಿ.ಕೆ.ಶಿವಕುಮಾರ್‌

0
Spread the love

ಮಂಡ್ಯ: ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ. ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಕೆಆರ್‌ಎಸ್ ಡ್ಯಾಂ ವೀಕ್ಷಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

Advertisement

ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ. ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನ ಕಾಪಾಡುವ ಕೆಲಸ ಮಾಡಿದ್ದೇವೆ. ಕಳೆದ ವರ್ಷ ಸಾಕಷ್ಟು ಬರಗಾಲ ಇತ್ತು. ಈಗ ಕಾವೇರಿ ತಾಯಿಯ ಕೃಪೆ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

40 ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು. ಸದ್ಯ 20 ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದಾರೆ ಅಂತಾ ಹೇಳ್ತಾರೆ. ನಾವು ಯಾವುದೇ ನೀರು ಬಿಟ್ಟಿಲ್ಲ.

ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ 30 ಟಿಎಂಸಿ ನೀರು ಹರಿದು ಹೋಗಿದೆ. ಇನ್ನು 10 ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ತಿಳಿಸಿದರು. ಸದ್ಯ ಡ್ಯಾಂನಿಂದ 50 ಸಾವಿರ ಕ್ಯುಸೆಕ್ ನೀರು ಹೋಗ್ತಿದೆ. ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದ್ದೇವೆ. 1,455 ಕೆರೆಗಳು ಕಾವೇರಿ ಕೊಳ್ಳದಲ್ಲಿವೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

 


Spread the love

LEAVE A REPLY

Please enter your comment!
Please enter your name here