HomePolitics Newsನಮಗೆ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸ ಇದೆ: ಸಂಸದ ಯದುವೀರ್ ವಿಶ್ವಾಸ

ನಮಗೆ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸ ಇದೆ: ಸಂಸದ ಯದುವೀರ್ ವಿಶ್ವಾಸ

For Dai;y Updates Join Our whatsapp Group

Spread the love

ಮೈಸೂರು: ನಮಗೆ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸ ಇದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಚುನಾವಣೆ ಸಂದರ್ಭ ಗ್ರೌಂಡ್ ರಿಪೋರ್ಟ್ ನೋಡಿದಾಗ ಅಲ್ಲಿನ ಜನರು ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಇದ್ದರು. ಹಾಗಾಗಿ ನಮ್ಮಗೆ ವಿಶ್ವಾಸ ಇದೆ, ಎನ್‌ಡಿಎ ಪರವಾಗಿ ಗೆಲುವು ಆಗುತ್ತದೆ ಎಂಬ ಭರವಸೆಯನ್ನು ಕ್ಷೇತ್ರದ ಜನರು ತುಂಬಿದ್ದಾರೆ ಎಂದರು.

ಇಬ್ಬರಲ್ಲಿ ಯಾರಿಗೆ ಗೆಲುವು ಆದ್ರೂ ಕೂದಲೆಳೆಯ ಅಂತರದಲ್ಲಿ ಆಗಬಹುದು. ಜಮೀರ್ ಅಹ್ಮದ್ ಅವರ ಮಾತಿನಿಂದ ಮತಗಳು ವಿಭಜನೆಯಾಗಿದೆ ಎಂಬ ಸಿ.ಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರಕ್ರಿಯಿಸಿ, ಅವರನ್ನೇ ಇನ್ನಷ್ಟು ನೇರವಾಗಿ ಪ್ರಶ್ನೆ ಮಾಡಬೇಕಾಗುತ್ತದೆ. ನಮ್ಮ ದೃಷ್ಟಿಕೋನದಲ್ಲಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಲ್ಲಾ ರೀತಿಯ ವಿಜಯವನ್ನು ಸಾಧಿಸುತ್ತಾರೆ. ನಮಗೂ ಅವರು ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!