ಮೈಸೂರು: ಚನ್ನಪಟ್ಟಣದಲ್ಲಿ ನಾವು ವೇದಿಕೆಯನ್ನು ಸೆಟ್ ಮಾಡಿಕೊಳ್ಳುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವೇದಿಕೆಯನ್ನು ಸೆಟ್ ಮಾಡಿಕೊಳ್ಳುತ್ತಿದ್ದೇವೆ. ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್‌ಎ ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡ್ತಾ ಇದ್ದೀವಿ. ನಮ್ಮ ಕೆಲಸಕ್ಕೆ ಜನರು ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ನಿಖಿಲ್ ಚುನಾವಣೆ ಸ್ಪರ್ಧೆಗೆ ಒತ್ತಾಯದ ವಿಚಾರವಾಗಿ ಮಾತನಾಡಿ, ಅವರ ಪಕ್ಷದಲ್ಲಿ ಯಾರೂ ಬೇಕಾದರೂ ನಿಲ್ಲಲಿ. ಅದು ಅವರ ಪಕ್ಷಕ್ಕೆ ಬಿಟ್ಟಿದ್ದು, ಅದರ ಬಗ್ಗೆ ನಾನು ಮಾತಾಡಲ್ಲ. ಚನ್ನಪಟ್ಟಣದಲ್ಲಿ ವ್ಯಕ್ತಿ ಮೇಲೆ ಚುನಾವಣೆ ನಡೆಯಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇನೆ. ಅವರು ಅಭ್ಯರ್ಥಿಯನ್ನು ಜೆಡಿಎಸ್ ಆದರೂ ಮಾಡಿಕೊಳ್ಳಲಿ, ಬಿಜೆಪಿ ಆದರೂ ಮಾಡಿಕೊಳ್ಳಲಿ. ನಮ್ಮ ಮನೆಯನ್ನು ನಾವು ರಿಪೇರಿ ಮಾಡಿಕೊಂಡರೆ ಸಾಕು ಎಂದು ಹೇಳಿದರು.