ನಮ್ಮ ಭವಿಷ್ಯದ ರೂವಾರಿಗಳು ನಾವೇ: ಡಾ.ರಾಜಶೇಖರ ಮೂಲಿಮನಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಮ್.ಅಗಡಿ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಸಿಇಟಿ ಹಾಗೂ ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮ ನಡೆಯಿತು.  

Advertisement

ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದ ಅಗಡಿ ಸನ್ ರೈಸ್ ಆಸ್ಪತ್ರೆಯ ಮುಖ್ಯ ಅಧಿಕಾರಿ ಡಾ.ರಾಜಶೇಖರ ಮೂಲಿಮನಿ, ಸ್ಪರ್ಧಾತ್ಮಕ ಪರೀಕ್ಷೆಯು ನಮ್ಮ ಗುರಿಸಾಧನೆಯ ಮೊದಲ ಮೆಟ್ಟಿಲು. ನಮ್ಮ ಭವಿಷ್ಯದ ರೂವಾರಿಗಳು ನಾವೇ ಆಗಿದ್ದರಿಂದ ವಿದ್ಯಾರ್ಥಿಗಳು ಶ್ರದ್ಧೆಯಿಂದ ಸತತಾಭ್ಯಾಸ ರೂಡಿಸಿಕೊಂಡರೆ ಯಶಸ್ಸು ಸಾಧ್ಯ ಎಂದರು.

ಅತಿಥಿಗಳಾಗಿ ಅಗಡಿ ಇಂಜಿನಿಯರಿAಗ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ, ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಹಯವದನ, ಹಣಕಾಸು ವಿಭಾಗದ ರವಿಪ್ರಕಾಶ ಹಾಗೂ ಕ್ಯಾಡಕಾನ ಎಜುಕೇಷನ್ ಲಿಮಿಟೆಡ್‌ನ ಮುಖ್ಯಸ್ಥ ಪ್ರೊ. ಸುದರ್ಶನ್, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕರಾದ ಸಿ.ಎಸ್. ಹಿರೇಮಠ, ವೇದಾ ವಸ್ತ್ರದ ನಿರೂಪಿಸಿದರು.


Spread the love

LEAVE A REPLY

Please enter your comment!
Please enter your name here