ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್

0
Spread the love

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಈ ತರಹ ಬರೆಸಿದ್ದಾರೆ.

Advertisement

ಇದರಿಂದ ಲಿಂಗಾಯತರ ಸಂಖ್ಯೆ ಕಡಿಮೆಯಾಗಿದೆ. ಎಲ್ಲರನ್ನೂ ಒಗ್ಗೂಡಿಸಿದರೆ ಲಿಂಗಾಯತರು 1 ಕೋಟಿಗೂ ಅಧಿಕ ಆಗುತ್ತಾರೆ. ಮೊದಲು ವರದಿಯನ್ನ ಅಧ್ಯಯನ ಮಾಡಿದ ನಂತರ ನಮ್ಮ ಸಂಶಯಗಳೇನಿವೆ ಅದನ್ನ ಚರ್ಚಿಸುತ್ತೇವೆ. ವರದಿಯ ಒಳಗಡೆ ಏನಿದೆ ಎಂದು ನೋಡಿ ನಂತರ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಬಿಜೆಪಿ ಜನಾಕ್ರೋಶ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ಮುಖ ಇಟ್ಟುಕೊಂಡು ಯಾತ್ರೆ ಮಾಡುತ್ತಾರೆ. ಕನ್ನಡಿಯಲ್ಲಿ ಮುಖ ನೋಡೋಕೆ ಹೇಳಿ ಅವರಿಗೆ. ಇಲ್ಲ ಮೋದಿ ಮುಖ ನೋಡಿ ಮೋದಿಗೆ ನಮಸ್ಕಾರ ಮಾಡಲು ಹೇಳಿ. 50 ರೂ. ಸಿಲಿಂಡರ್ ದರ ಜಾಸ್ತಿ ಆಗಿದೆ. ಡಿಸೇಲ್, ಪೆಟ್ರೋಲ್ ದರ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here