ಶಿವಮೊಗ್ಗ: ಬಡ ಜನರಿಗೆ ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡ್ತಿದೆ. ಬಡ ಜನರಿಗೆ ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಶಿಗ್ಗಾಂವಿಯಲ್ಲಿ ಬಂಡಾಯದ ವಿಚಾರವಾಗಿ, ಖಾದ್ರಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಹಿಂದೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅವರ ಮನವೊಲಿಸುತ್ತೇವೆ, ಅವರು ನಾಮಪತ್ರ ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿದ್ದಾರೆ.
ಹೆಚ್ಎಮ್ಟಿ ಭೂಮಿ ಅರಣ್ಯ ಇಲಾಖೆ ವಶ ಪಡಿಸಿಕೊಂಡ ವಿಚಾರವಾಗಿ, ಹಿಂದೆ ಆ ಜಾಗವೆಲ್ಲಾ ಅರಣ್ಯ ಇಲಾಖೆಗೆ ಸೇರಿತ್ತು. ಇದೀಗ ಆ ಜಾಗ ಖಾಲಿ ಇದ್ದ ಕಾರಣ ಮತ್ತೆ ಇಲಾಖೆ ವಶಕ್ಕೆ ಪಡೆದಿದೆ. ಇನ್ನೂ ಶರಾವತಿ ನೀರು ಬೆಂಗಳೂರಿಗೆ ಕೊಂಡೊಯ್ಯುವ ವಿಚಾರವಾಗಿ, ಈ ಹಿಂದೆ ನಾನು ಡಿಸಿಎಂ ಆಗಿದ್ದಾಗ ಈ ಬಗ್ಗೆ ಚರ್ಚೆ ಮಾಡಿದ್ದೆ. ಈಗ ಅಂತಹ ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.