ಬೆಂಗಳೂರು: ನಮ್ಮಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರಿಗೆ ನಾವು ಟಿಕೆಟ್ ಕೊಟ್ಟಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಈಗ ಡಿಕೆಶಿ ವಿರುದ್ಧ ಕ್ರಮ ಆಗಬೇಕು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದರು.
Advertisement
ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿ, ಈಗ ನಾನು ಹಾಗೆ ಹೇಳೆ ಇಲ್ಲ ಎನ್ನುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲರೂ ನೋಡಿದ್ದಾರೆ. ಅವರು ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಾರೆ. ಮಾತಾಡಿದರು ಈಗ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.