ಬೆಂಗಳೂರು: ಬಿಜೆಪಿಯಿಂದ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸದ್ಯ ಮಾಡಲು ಏನೂ ಕೆಲಸವಿಲ್ಲ. ಅವರಿಗೆ ಸಾಮಾನ್ಯ ತಿಳಿವಳಿಕೆ ಕೂಡಾ ಇಲ್ಲವಾಗಿದೆ. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿಯವರು 5,900 ಕೋಟಿ ಸಾಲ ಇಟ್ಟು ಹೋಗಿದ್ದರು ಎಂದು ಕಿಡಿಕಾರಿದ್ದಾರೆ.
Advertisement
ಬಿಎಂಟಿಸಿ ಹೊರತುಪಡಿಸಿ ರಾಜ್ಯದ ಯಾವುದೇ ವಿಭಾಗದಲ್ಲಿ ಒಂದು ಬಸ್ ಕೂಡಾ ಖರೀದಿ ಮಾಡಿರಲಿಲ್ಲ. 2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾದ ಮೇಲೆ 6,300 ಬಸ್ ಖರೀದಿಸೋ ಪ್ರಕ್ರಿಯೆ ಆರಂಭವಾಗಿದೆ. 9,000 ಸಿಬ್ಬಂದಿ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಬಿಜೆಪಿಯಿಂದ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ಹೇಳಿದರು.