ಪಂಜಾಬ್: ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ಐಎಎಫ್ ಯೋಧರನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಯಾವುದೇ ಸ್ಥಳವೂ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ.
ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ.
ನಾವು ಅವರ ಮನೆಯೊಳಗೆ ನುಗ್ಗಿ ಹೊಡೆದಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳನ್ನು ಹಿಡಿಯುವುದು ನಮ್ಮ ಸಂಪ್ರದಾಯ. ಆದ್ದರಿಂದ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಕಸಿದುಕೊಂಡಾಗ ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ” ಎಂದು ಮೋದಿ ಹೇಳಿದ್ದಾರೆ.