ಹಾವೇರಿ: ವಿಧಾನಸೌಧಕ್ಕೆ ಟ್ರ್ಯಾಕ್ಟರ್ ಸಮೇತ ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬಂದ ವೇಳೆ ಮಾತನಾಡಿದ ಅವರು, ಈಗ ಸುಮಾರು ಒಂಭತ್ತುವರೆ ಲಕ್ಷ ಎಕರೆ ವಕ್ಪ್ ಆಸ್ತಿ ಇದೆಯಂತೆ. ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಂಸದರ ಒತ್ತಡದಿಂದ ವಕ್ಫ್ ಕಾಯ್ದೆ ತಿದ್ದುಪಡಿ ಮಾಡಲು ಸಂಸತ್ತಿನ ಜಂಟಿ ಸದನ ಸಮಿತಿ ರಚನೆ ಮಾಡಿದ್ದಾರೆ.
ಪಾಕಿಸ್ತಾನದಲ್ಲಿ 8ಲಕ್ಷ ಎಕರೆ ಐತಿ, ಭಾರತದಲ್ಲಿ 9.5 ಲಕ್ಷ ಎಕರೆ ವಕ್ಫ್ ಆಸ್ತಿ ಇದೆ. ಕಾಂಗ್ರೆಸ್ ನವರು ಭಾರತದಲ್ಲಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಪಂಚಮಸಾಲಿ ಸಮುದಾಯಕ್ಕೆ ಬಸವರಾಜ ಬೊಮ್ಮಾಯಿ 2 ಡಿ ಮೀಸಲಾತಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಅದನ್ನು ಜಾರಿ ಮಾಡುತ್ತಿಲ್ಲ. ಮೀಸಲಾತಿ ನೀಡುವಂತೆ ನಾವು ಡಿಸೆಂಬರ್ ನಲ್ಲಿ ವಿಧಾನಸೌಧಕ್ಕೆ ಟ್ರ್ಯಾಕ್ಟರ್ ಸಮೇತ ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.