ಬೆಂಗಳೂರು:- ನಮ್ಮಲ್ಲಿ ಯಾವುದೇ ಬಣ ಇಲ್ಲ, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸತ್ಯ ಎಂದು ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಬಿಜೆಪಿ ರೆಬಲ್ ಟೀಂ ದೆಹಲಿ ಪ್ರವಾಸಕ್ಕೆ ಹೋಗಿರೋ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಅಷ್ಟೇ ಸತ್ಯ. ನಮ್ಮಲ್ಲಿ ಯಾವುದೇ ಬಣ ಇಲ್ಲ. ಕೇಂದ್ರದಲ್ಲಿ ಮೋದಿ ನೇತೃತ್ವದ ಉತ್ತಮವಾಗಿ ಸರ್ಕಾರ ನಡೆಯುತ್ತಿದೆ. ವಿಜಯೇಂದ್ರ ಅಧ್ಯಕ್ಷರಾಗಿ 2 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಯಶಸ್ವಿಯಾಗಿ ಕೆಲಸ ಮಾಡ್ತಾ ಇದ್ದಾರೆ. ಯಾರೂ ಮಾತನಾಡಬಾರದೆಂದು ಹೈಕಮಾಂಡ್ ನಮಗೆ ಹೇಳಿದೆ.
ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ. ನಾವು ಸುಮ್ಮನೆ ಇದ್ದೇವೆ ಅಂದ್ರೆ ಅದು ನಮ್ಮ ದೌರ್ಬಲ್ಯ ಅಲ್ಲ. ಸೂರ್ಯ ಚಂದ್ರ ಇರುವಷ್ಟೇ ಸತ್ಯವಾಗಿ ವಿಜಯೇಂದ್ರ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. 2028ರ ಚುನಾವಣೆ ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಅಂತ ತಿಳಿಸಿದರು.


