ಮಂಗಳೂರು: ನಾವು ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಬುದ್ಧಿವಂತ ಮತದಾರರ ಜೊತೆಗೆ ಗೊಂದಲ ಸೃಷ್ಟಿಸಲು ತೆರಿಗೆ ಪಾಲು ನೀಡುತ್ತಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ನಾವು ಕರ್ನಾಟಕ ಬಿಡಿ, ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ.
Advertisement
ಈ ಹಿಂದೆ ಯುಪಿಎ ಸರ್ಕಾರ ನೀಡುತ್ತಿದ್ದ ಪಾಲು ಈಗ ಬಿಜೆಪಿ ಸರ್ಕಾರ ನೀಡುತ್ತಿರುವ ಪಾಲನ್ನು ತುಲನೆ ಮಾಡಿ ಹೇಳಲಿ. 2014ರಿಂದ 2024ರವರೆಗೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೀಡಿದ ಪಾಲು ಮೊದಲಿಗಿಂತ ಹೆಚ್ಚಿದೆ. ಎಲ್ಲ ರಾಜ್ಯಗಳಿಗೆ ಹೆಚ್ಚಾಗಿ ನೀಡಲಾಗಿದೆ. ಮುಖ್ಯಮಂತ್ರಿ ಅವರು ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಹಣಕಾಸು ಸಮಿತಿ ಎಲ್ಲವನ್ನು ನಿರ್ಧಾರ ಮಾಡುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.