ಮಂಗಳೂರು: ನಾವು ಸತ್ಯ ಬಿಟ್ಟು ಹಿಂದೆ ಹೋಗಿಲ್ಲ, ಮುಂದೆಯೂ ಹೋಗಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಇಂದು ರಾಜ್ಯದ ಜೈನ ಸಮುದಾಯದಿಂದ ಧರ್ಮಸ್ಥಳ ಚಲೋ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ವೀರೇಂದ್ರ ಹೆಗ್ಗಡೆ ಅವರು,
ನಾವು ಮಾಡುವ ಪ್ರಯತ್ನಗಳಿಗೆ ಸ್ವಾಮಿಯ ಅನುಗ್ರಹ ಇದ್ದೇ ಇದೆ. ನಾವು ಸತ್ಯ ಬಿಟ್ಟು ಹಿಂದೆ ಹೋಗಿಲ್ಲ, ಮುಂದೆಯೂ ಹೋಗಲ್ಲ. ಆದ್ದರಿಂದ ಭಕ್ತರು ತಾಳ್ಮೆಯಿಂದಿರಬೇಕು, ಶಾಂತಿ ಕಾಪಾಡಬೇಕು ಎಂದು ಕರೆ ನೀಡಿದರು.
ಇನ್ನೂ ಸತ್ಯಕ್ಕೆ ಎರಡು ಮುಖ ಇಲ್ಲ, ಒಂದೇ ಮುಖ. ವ್ಯಕ್ತಿ ಯಾವುದೇ ಧರ್ಮವಾಗಲಿ, ಆ ಧರ್ಮಕ್ಕೆ ಶರಣಾಗಬೇಕು. ಇಲ್ಲದಿದ್ದರೆ ಅವರು ಅನುಯಾಯಿಗಳೇ ಅಲ್ಲ. ಇಷ್ಟೊಂದು ಜನ ಶ್ರೀಗಳು ನಮಗೆ ಧೈರ್ಯ ಕೊಟ್ಟಿದ್ದಾರೆ.
ಎಲ್ಲರ ಮೇಲೂ ಮಂಜುನಾಥನ ಆಶೀರ್ವಾದ ಇಲ್ಲಲಿ ಎಂದರಲ್ಲದೇ ಜನಿವಾರ ಜಾತಿ ವೇಷಕ್ಕಲ್ಲ, ಮೂರು ಧರ್ಮಗಳ ಆಚರಿಸೋದಕ್ಕಾಗಿ ಜನಿವಾರ ಧಾರಣೆ ಮಾಡ್ತೀವಿ. ಅದೇ ರೀತಿ ದಶಲಕ್ಷಣ ಇರೋದು ಪೂಜೆಗಲ್ಲ ಪ್ರಾರ್ಥನೆ ಮಾಡೋಕೆ ಎಂದು ಕಿವಿಮಾತು ಹೇಳಿದರು.