NDA ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ ಇದೆ: ಬಿ.ಎಸ್.ಯಡಿಯೂರಪ್ಪ

0
Spread the love

ಬೆಂಗಳೂರು: ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್‌ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಫಿಕ್ಸ್‌ ಆಗಿದ್ದು, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಂತಾ ಘೋಷಣೆ ಮಾಡಿದ್ದೇವೆ. ಅವರ ಮೇಲೆ ಮೋದಿ ಆಶೀರ್ವಾದ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಯಡಿಯೂರಪ್ಪ ಘೋಷಿಸಿದರು. ಬಳಿಕ ನಿಖಿಲ್‌ಗೆ ಹೂಗುಚ್ಛ ನೀಡಿ ನೀಡಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್‌ಗೆ ಯಡಿಯೂರಪ್ಪ ಹಾಕಿದರು. ಹೂವಿನ ಹಾರ ಹಾಕಿ ಅಭಿನಂದಿಸಿದರು. ಜೊತೆಗೆ ಎಲ್ಲಾ ನಾಯಕರು ವಿಕ್ಟರಿ ಸಿಂಬಲ್ ತೋರಿಸಿ ಪರಸ್ಪರ ಕೈ ಕುಲುಕಿದರು.

ಈ ವೇಳೆ ಮಾತನಾಡಿದ ಬಿಎಸ್‌ವೈ, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಅಂತಾ ಘೋಷಣೆ ಮಾಡಿದ್ದೇವೆ. ಮೋದಿ ಆಶೀರ್ವಾದ ಇದೆ. ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ತಾರೆ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ, ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ನಾವೆಲ್ಲ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಗೆಲ್ತೇವೆ, ಬಂದು ಭೇಟಿ ಮಾಡ್ತೇವೆ. ಎನ್‌ಡಿಎ ನಾಯಕರು ಪ್ರವಾಸ ಮಾಡ್ತೀವಿ. ಪಕ್ಷಾಂತರ ಮಾಡಿದವರ ಬಗ್ಗೆ ಮಾತಾಡೊಲ್ಲ. ನಾವು ನಮ್ಮ ಅಭ್ಯರ್ಥಿ ಪರ ಕೆಲಸ ಮಾಡ್ತೀವಿ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೀವಿ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here