ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ, ನಾವೆಲ್ಲ ಸಿಎಂ ಅವರ ಜೊತೆಗಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್

0
Spread the love

ಬೆಳಗಾವಿ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲ ಅವರ ಜೊತೆಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ.

Advertisement

ನಾವೆಲ್ಲ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಇನ್ನೂ ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಕೈ ನಾಯಕರ ಹೇಳಿಕೆಗೆ ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.


Spread the love

LEAVE A REPLY

Please enter your comment!
Please enter your name here