ಬೆಂಗಳೂರು: ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಪಚುನಾವಣಾ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ.
ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಇನ್ನೂ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ. ಏನು ಲೋಪ ಆಗಿದೆ ಎಂದು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ಸಂವಿಧಾನ ದಿನದ ಬಗ್ಗೆ ಮಾತನಾಡಿ, ಇಂದು ಸಂವಿಧಾನ ದಿನ. ಇದು ಅಂಬೇಡ್ಕರ್ ಕೊಟ್ಟಂತಹ ಸಂವಿಧಾನ. ಇಡೀ ವಿಶ್ವವೇ ಅಚ್ಚರಿ ಪಡುವಂತಹ ಸಂವಿಧಾನವನ್ನು ಅಂಬೇಡ್ಕರ್ ನಮಗೆ ಕೊಟ್ಟಿದ್ದಾರೆ. ಆದ ಕಾರಣ ನಾವು ದೇಶದಲ್ಲಿ ಸಂವಿಧಾನ ದಿನ ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.



