ಬೆಂಗಳೂರು: ಮೈಸೂರಿನ ಹಿಂದೂಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೈಸೂರಿನ ಹಿಂದೂಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮೈಸೂರಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ಈಗಾಗಲೇ ಮಾತಾಡಿದ್ದೇನೆ. ಪೊಲೀಸರು ಕೈ ಚೆಲ್ಲಿ ಕುಳಿತಿರುವುದರಿಂದ ನಾವೇ ಶಾಂತಿ ಕಾಪಾಡಬೇಕಾಗಿದೆ.
ನಾನು ಕೂಡ ಮೈಸೂರಿಗೆ ಭೇಟಿ ನೀಡುತ್ತೇನೆ. ಕೆಎಫ್‌ಡಿ, ಪಾಪ್ಯುಲರ್ ಫ್ರಂಟ್ ಮೊದಲಾದ ಸಂಘಟನೆಗಳು ಮೈಸೂರಿನಲ್ಲಿ ಸಕ್ರಿಯವಾಗಿವೆ. ಕೇರಳದಿಂದ ಬಂದು ಕೊಲೆ, ಅಪಹರಣ ಮಾಡಿ ಹೋಗಿರುವ ಘಟನೆಗಳು ನಡೆದಿವೆ ಎಂದಿದ್ದಾರೆ.
ಇನ್ನೂ ಒಂದೆಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಹದಗೆಟ್ಟಿದೆ. ಈಗ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದರೂ, ಅದು ವ್ಯರ್ಥ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ. ಮತಬ್ಯಾಂಕ್‌ಗಾಗಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.