ಒಂದೇ ವಿಚಾರಕ್ಕೆ 2 ಕಡೆ ತನಿಖೆ ಬೇಡವೆಂದು CID ತನಿಖೆಯನ್ನು ಹಿಂಪಡೆದಿದ್ದೇವೆ: ಜಿ. ಪರಮೇಶ್ವರ್

0
Spread the love

ಬೆಂಗಳೂರು: ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಬೇಡವೆಂದು ಸಿಐಡಿ ತನಿಖೆಯನ್ನು ಹಿಂಪಡೆದಿದ್ದೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸ್ ಪ್ರೊಟೊಕಾಲ್ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶಿಸಿದೆ.

Advertisement

ಅಷ್ಟರೊಳಗಾಗಲೇ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು’ ಎಂದು ಹೇಳಿದ್ದಾರೆ.

ಈ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ ಇದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಕಾರಣದಿಂದಲೇ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು ಮತ್ತು ಸರ್ಕಾರ ಸಿಐಡಿ ತನಿಖೆ ಆದೇಶವನ್ನು ಹಿಂದಕ್ಕೆ ಪಡೆಯಿತು ಎನ್ನುವ ಮಾತು ಕೇಳಿ ಬಂದಿದ್ದವು.

ಈ ಬಗ್ಗೆಯೂ ಪರಮೇಶ್ವರ್ ಮಾತನಾಡಿದ್ದಾರೆ. ‘ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here