HomePolitics Newsಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ನಾವು ವಿರೋಧಿಸುತ್ತೇವೆ: ಬಿ.ವೈ.ವಿಜಯೆಂದ್ರ

ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ನಾವು ವಿರೋಧಿಸುತ್ತೇವೆ: ಬಿ.ವೈ.ವಿಜಯೆಂದ್ರ

For Dai;y Updates Join Our whatsapp Group

Spread the love

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ನಾವು ವಿರೋಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೆಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ.

ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿಯು ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ. ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟ್ನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದರು.

ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದ್ಯಾ? ಸ್ವಾತಂತ್ರ‍್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿ. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!