ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ಜನರು ಅದಕ್ಕೆ ಹೊಂದಿಕೊಳ್ಳುತ್ತಾರೆ. ಕುಡಿಯುವ ನೀರಿನ ಬಾಟಲಿಗೂ ಹೆಚ್ಚಿನ ಹಣ ನೀಡುತ್ತಾರೆ. ಆದರೆ, ರೈತರು ಕಷ್ಟಪಟ್ಟು ಉತ್ಪಾದಿಸುವ ಹಾಲಿನ ಬೆಲೆ ಹೆಚ್ಚಳಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದ್ದಾರೆ.
ನಂದಿನಿ ಹಾಲಿನ ದರ ಹೆಚ್ಚಳದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡೀಸೆಲ್, ಪೆಟ್ರೋಲ್, ಪ್ಲಾಸ್ಟಿಕ್ ಪ್ಯಾಕಿಂಗ್ ಹಾಗೂ ಸಾರಿಗೆ ವೆಚ್ಚಗಳು ಹೆಚ್ಚಾಗಿರುವುದನ್ನು ಪರಿಗಣಿಸಿ ದರ ಪರಿಷ್ಕರಣೆಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ದರ ಹೆಚ್ಚಳದಿಂದ ಪ್ರತಿ ಲೀಟರ್ಗೆ ಕೆಎಂಎಫ್ಗೆ ಒಂದು ರೂಪಾಯಿ ಹಾಗೂ ರೈತರಿಗೆ ಏಳು ರೂಪಾಯಿ ಹೆಚ್ಚುವರಿ ಹಣ ನೀಡಲು ನಿರ್ಧರಿಸಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆಯುವುದು ಅಗತ್ಯ. ಕರ್ನಾಟಕ ಸರ್ಕಾರ ರೈತರ ಪರವಾಗಿದ್ದು, ಅವರ ಹಿತದೃಷ್ಟಿಯಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.









