ಬೆಂಗಳೂರು: ರೈತರ ಈ ಸಮಸ್ಯೆ ಪರಿಹಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ವಿಚಾರ ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದು,
ಬಿಜೆಪಿ ರೈತರ ಪರ ಇದೆ. ನಾವು ಅವರ ಜೊತೆಯಲ್ಲಿದ್ದೇವೆ. ರೈತರ ಈ ಸಮಸ್ಯೆ ಪರಿಹಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಕಾನೂನಿನ ಸಹಾಯ ಸೇರಿ ಯಾವುದೇ ರೀತಿಯ ಸಹಕಾರವನ್ನು ಬಿಜೆಪಿ ಕೊಡಲಿದ್ದು, ಅವರ ಜೊತೆ ಗಟ್ಟಿಯಾಗಿ ನಿಲ್ಲಲಿದೆ ಎಂದು ತಿಳಿಸಿದರು.
ಇನ್ನೂ ನಿಖಿಲ್ ಕುಮಾರಸ್ವಾಮಿ, ಹಿರಿಯರಾದ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಮೊಮ್ಮಗ ಇರಬಹುದು. ಆದರೆ ಅವರು ಇವತ್ತು ಎನ್‍ಡಿಎ ಅಭ್ಯರ್ಥಿ. ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಕರ್ತವ್ಯ ನಮ್ಮೆಲ್ಲರದೂ ಇದೆ. ಯಾವ ರೀತಿ ರಾಜಕಾರಣದಲ್ಲಿ ಹುಚ್ಚುಚ್ಚಾಗಿ ಆಡಿ ಪಕ್ಷ ಬಿಟ್ಟು ಹೋಗಿದ್ದಾರೆ. ಇವೆಲ್ಲವನ್ನೂ ಆ ಕ್ಷೇತ್ರದ ಜನರೂ ಗಮನಿಸುತ್ತಿದ್ದಾರೆ ಎಂದರು.