ಬೆಂಗಳೂರು: 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದರು.
ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು.



