ಬೆಂಗಳೂರು: ಸಂಪುಟದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಅವರು ರಾಜ್ಯಪಾಲರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿ ನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ಗುಡ್ ರಿಲೇಷನ್ಶಿಪ್ ಇರುತ್ತೆ. ಆದರೆ ಹೀಗಾದರೆ ಸ್ಮೂತ್ ಆಗಿ ಆಗೋದಿಲ್ಲ.
Advertisement
ಮುಂದೆ ಏನು ಮಾಡಬೇಕೆಂದು ಸಿಎಂ ಜತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಸಂಪುಟದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.