ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ,
Advertisement
ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ತಿಳಿಸಿದರು.