ಬೆಂಗಳೂರು: ನಾವು ಯಾವುದೇ ಕಾರಣಕ್ಕೂ ಸರ್ಕಾರ ಕೆಡವಲು, ಅಸ್ಥಿರಗೊಳಿಸಲು ಬಿಡೋದಿಲ್ಲ ಎಂದು ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಆಮಿಷದಿಂದ ನಮಗೆ ಯಾವುದೇ ಆತಂಕ ಇಲ್ಲ, ನಮ್ಮ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಜೆಡಿಎಸ್ ಎಲ್ಲ ಪ್ರಯತ್ನ ಮಾಡ್ತಿದ್ದಾರೆ. ಶಾಸಕರಿಗೆ ಆಮಿಷ ತೋರಿಸೋದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ.
Advertisement
ನಾವು ಸರ್ಕಾರ ಕೆಡವಲು, ಅಸ್ಥಿರಗೊಳಿಸಲು ಬಿಡೋದಿಲ್ಲ, ನಾವು ಇದನ್ನು ಎದುರಿಸ್ತೇವೆ. ಜನಾದೇಶ ನಮ್ಮ ಪರವಾಗಿದ್ದರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದರು. ಇನ್ನೂ ಜನ ಎಲ್ಲವನ್ನೂ ಗಮನಿಸಿ ತೀರ್ಮಾನಿಸುತ್ತಾರೆ. ಅಷ್ಟು ಸುಲಭವಾಗಿ ಜನ ಒಪ್ಪಿಕೊಳ್ಳಲ್ಲ, ಅವರನ್ನು ತಿರಸ್ಕರಿಸುತ್ತಾರೆ. ನಾವೂ ಕೂಡ ಜನರ ಮುಂದೆ ಎಲ್ಲವನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.