Pahalgam Attack: ತೆರೆಮರೆಯಲ್ಲಿದ್ದುಕೊಂಡು ಪಿತೂರಿ ನಡೆಸಿದವರನ್ನೂ ನಾವು ಬಿಡೋದಿಲ್ಲ: ರಾಜನಾಥ್ ಸಿಂಗ್ ಎಚ್ಚರಿಕೆ

0
Spread the love

ನವದೆಹಲಿ: ತೆರೆಮರೆಯಲ್ಲಿದ್ದುಕೊಂಡು ಪಿತೂರಿ ನಡೆಸಿದವರನ್ನೂ ನಾವು ಬಿಡೋದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನದ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ.

Advertisement

ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೇವೆ. ತೆರೆಮರೆಯಲ್ಲಿದ್ದುಕೊಂಡು ಪಿತೂರಿ ನಡೆಸಿದವರನ್ನೂ ನಾವು ಬಿಡೋದಿಲ್ಲ. ಭಾರತ ಸರ್ಕಾರ ಉಗ್ರರನ್ನು ಸದೆಬಡಿಯಲು ಅಗ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ.

ಭಾರತವು ಪ್ರಾಚೀನ ನಾಗರಿಕತೆ ಮತ್ತು ದೊಡ್ಡ ಜನಸಂಖ್ಯೆಯುಳ್ಳ ದೇಶವಾಗಿದೆ. ಇಂತಹ ಭಯೋತ್ಪಾದಕ ಚಟುವಟಿಕೆಗಳಿಂದ ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here